ಮೇ ಅಂತ್ಯದೊಳಗೆ ಮಳೆಹಾನಿ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ : ಜಿಲ್ಲಾಧಿಕಾರಿ ಭರವಸೆ

13/05/2020

ಮಡಿಕೇರಿ ಮೇ 13 : ಮಡಿಕೇರಿ ತಾಲ್ಲೂಕಿನ ಮದೆನಾಡು ಹಾಗೂ ಸೋಮವಾರಪೇಟೆ ತಾಲ್ಲೂಕಿನ ಜಂಬೂರು ಗ್ರಾಮದಲ್ಲಿ ಮಳೆಹಾನಿ ಸಂತ್ರಸ್ತರಿಗಾಗಿ ನಿರ್ಮಿಸಲಾಗಿರುವ ನೂತನ ಮನೆಗಳನ್ನು ಮೇ ತಿಂಗಳ ಅಂತ್ಯದೊಳಗೆ ಹಸ್ತಾಂತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಗಾಲ ಆರಂಭಕ್ಕೂ ಮೊದಲು ಮನೆಗಳ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.