ಕುಶಾಲನಗರದಲ್ಲಿ ರಕ್ತದಾನ ಶಿಬಿರ

13/05/2020

ಮಡಿಕೇರಿ ಮೇ 13 : ಕುಶಾಲನಗರದ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಮತ್ತು ಜೆಸಿಐ ಕುಶಾಲನಗರ ಕಾವೇರಿ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ರಕ್ತನಿಧಿ ಘಟಕದ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.
ಕುಶಾಲನಗರದ ವಾಸವಿ ಮಹಲ್ ಸಭಾಂಗಣದಲ್ಲಿ ನಡೆದ ಶಿಬಿರಕ್ಕೆ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಅಧ್ಯಕ್ಷ ವಿ.ಪಿ. ನಾಗೇಶ್ ಚಾಲನೆ ನೀಡಿದರು.
ರಕ್ತನಿಧಿ ಘಟಕದ ಡಾ. ಕರುಂಬಯ್ಯ ಅವರ ನೇತೃತ್ವದಲ್ಲಿ ನಡೆದ ಶಿಬಿರದಲ್ಲಿ ಜೆಸಿಐ ಸ್ಥಾಪಕ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್, ಕುಶಾಲನಗರ ಜೆಸಿಐ ಅಧ್ಯಕ್ಷ ಸುಜಯ್‍ನಾಗ್, ನಿಕಟಪೂರ್ವ ಅಧ್ಯಕ್ಷ ಕೆ.ಡಿ. ಪ್ರಶಾಂತ್, ಕಾರ್ಯದರ್ಶಿ ರೋಷನ್, ಪ್ರಮುಖರಾದ ಪ್ರವೀಣ್, ಎಸ್.ಬಿ. ನಂದಕುಮಾರ್ ಹಾಗೂ ಸಿಬ್ಬಂದಿಗಳು ಇದ್ದರು.