ಮೇ 22 ರಂದು ಉಸ್ತುವಾರಿ ಸಚಿವ ಕೊಡಗು ಭೇಟಿ

13/05/2020

ಮಡಿಕೇರಿ ಮೇ 13 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮೇ 22 ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಅಂದು ಮಧ್ಯಾಹ್ನ 12 ಗಂಟೆಗೆ ಕೋವಿಡ್-19 ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಛತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮೇ 29 ರಂದು ಮುಖ್ಯಮಂತ್ರಿಗಳಿಂದ ಮದೆ ಹಾಗೂ ಜಂಬೂರು ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿದ ಮನೆಗಳ ಹಸ್ತಾಂತರ ಕಾರ್ಯಕ್ರಮ ಹಿನ್ನೆಲೆ ಪೂರ್ವಭಾವಿ ಸಭೆಯನ್ನು ನಗರದ ನೂತನ ಜಿ.ಪಂ ಸಭಾಂಗಣದಲ್ಲಿ ನಡೆಸಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಮದೆ, ಬಿಳಿಗೆರೆ, ಗಾಳೀಬೀಡು ಹಾಗೂ ಜಂಬೂರು ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗಾಗಿ ನಿರ್ಮಾಣವಾಗುತ್ತಿರುವ ಮನೆಗಳ ಕಾಮಗಾರಿಗಳ ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ ನರೇಂದ್ರ ಅವರು ತಿಳಿಸಿದ್ದಾರೆ.