ಕಾರೆಕೊಪ್ಪಲಿನಲ್ಲಿ ಕಾಡಾನೆ ದಾಳಿ : ಇಬ್ಬರಿಗೆ ಗಂಭೀರ ಗಾಯ

May 13, 2020

ಮಡಿಕೇರಿ ಮೇ 13 : ಕೊಡಗು ಜಿಲ್ಲೆಯ ವಿವಿಧೆಡೆ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಸೋಮವಾರಪೇಟೆ ತಾಲ್ಲೂಕಿನ ಕಾರೆಕೊಪ್ಪಲಿನಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಸ್ಕೂಟರ್ ನಲ್ಲಿ ಕುಶಾಲನಗರದಿಂದ ಮನೆಗೆ ತೆರಳುತ್ತಿದ್ದಾಗ ಯಡವನಾಡು ಮೀಸಲು ಅರಣ್ಯದ ಸಮೀಪ ಕೆಂಚಮ್ಮನಬಾಣೆಯ ನಿವಾಸಿಗಳಾದ ಕೃಷ್ಣ(45) ಹಾಗೂ ಕುಶಾಲ(55) ಅವರುಗಳ ಮೇಲೆ ಕಾಡಾನೆ ದಾಳಿ ಮಾಡಿ ಗಾಯಗೊಳಿಸಿದೆ. ಗಾಯಾಳುಗಳನ್ನು ಮಡಿಕೇರಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆರ್ ಎಫ್ ಒ ಮನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.