Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:00 AM Friday 22-October 2021

ವಿವಿಧ ಬಡಾವಣೆಗಳಿಗೆ ಉಚಿತ ಪಡಿತರ ವಿತರಿಸಲು ಮನವಿ

14/05/2020

ಮಡಿಕೇರಿ ಮೇ 13 : ಕೊರೋನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕವಾಗಿ ನಷ್ಟಕ್ಕೊಳಗಾಗಿರುವ ನಗರದ ನಿವಾಸಿಗಳಿಗೆ ಸರಕಾರದಿಂದ ಉಚಿತವಾಗಿ ಪಡಿತರ ಸಾಮಾಗ್ರಿಗಳನ್ನು ವಿತರಿಸುವಂತಾಬೇಕು ಎಂದು ಮಡಿಕೇರಿ ನಾಗರಿಕರ ಪರವಾಗಿ ಹಲವು ಜಿಲ್ಲಾಡಳಿತದ ಗಮನಸೆಳೆದಿದ್ದಾರೆ.
ಈ ಸಂಬಂಧವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಸಾಶನ ಸಮಿತಿ ಸದಸ್ಯ ಎಂ.ಕೆ.ಜಯಕುಮಾರ್, ಹಿರಿಯ ನಾಗರಿಕರಾದ ಡಿ.ಹೆಚ್. ತಮ್ಮಪ್ಪ, ಪಿ.ಎ.ಚಂದ್ರ, ವಕೀಲ ಬಿ.ಎಸ್.ರುದ್ರಪ್ರಸನ್ನ ಹಾಗೂ ನಗರಸಭೆ ಮಾಜಿ ಸದಸ್ಯ ಬಿ.ಕೆ.ಅರುಣ್‍ಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಮಡಿಕೆರಿ ನಗರದ ರಾಜರಾಜೇಶ್ವರಿ ನಗರ, ತ್ಯಾಗರಾಜ ಕಾಲೋನಿ, ಮಹದೇವಪೇಟೆ, ಶಾಸ್ತ್ರಿನಗರ, ಗಣಪತಿ ಬೀದಿ, ಗೌಳಿಬೀದಿ, ಚಾಮುಂಡೇಶ್ವರಿ ನಗರ, ಇಂದಿರಾ ನಗರ, ಜ್ಯೋತಿನಗರ ಮುಂತಾದ ಸ್ಥಳಗಳಲ್ಲಿ ನಡೆಸಿರುವ ಸಮೀಕ್ಷೆಯ ಪ್ರಕಾರ, ಈ ಬಡಾವಣೆಗಳಲ್ಲಿ ಬಹುತೇಕ ದಿನಗೂಲಿ ನೌಕರರು, ಬಡಗಿಗಳು, ಸಣ್ಣ ವ್ಯಾಪಾರಿಗಳು, ಇಲೆಕ್ಟ್ರಿಷಿಯನ್, ನಗರದ ಸಣ್ಣ ಹೊಟೇಲ್ ಮತ್ತು ಅಂಗಡಿಗಳಲ್ಲಿ ದುಡಿಯುವ ಕಾರ್ಮಿಕರೇ ಅಧಿಕವಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಲಾಕ್‍ಡೌನ್‍ನಿಂದಾಗಿ ಯಾವುದೇ ಆದಾಯವಿಲ್ಲದೆ ಈ ಮಂದಿ ದಿನನಿತ್ಯದ ಅಗತ್ಯಗಳಿಗೆ ಯಾವುದೇ ಮಾರ್ಗ ಕಾಣದೆ ಕಂಗಾಲಾಗಿದ್ದಾರೆ. ಅವರ ಕೈಯ್ಯಲ್ಲಿದ್ದ ಅಲ್ಪಸ್ವಲ್ಪ ಉಳಿಕೆಯೂ ಖರ್ಚಾಗಿ ಮುಂದೆ ದಾರಿ ಕಾಣದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರುಗಳು ಜಿಲ್ಲಾಧಿಕಾರಿಗಳ ಗಮನಸೆಳೆದಿದ್ದಾರೆ.
ಈ ಮಂದಿ ಹೆಚ್ಚಿನವರು ವಾಹನಗಳನ್ನು ಹೊಂದಿದ್ದಾರೆ ಎಂಬ ಕಾರಣಕ್ಕೆ ಎಪಿಎಲ್ ಪಟ್ಟಿಗೆ ಸೇರ್ಪಡೆಯಾಗಿದ್ದು, ಅವರಿಗೆ ಆಪತ್ಕಾಲದಲ್ಲಿ ಸರಕಾರದಿಂದ ಸಿಗಬಹುದಾಗಿದ್ದ ಎಲ್ಲಾ ಸವಲತ್ತುಗಳಿಂದಲೂ ವಂಚಿತರಾಗಿದ್ದಾರೆ. ಆದ್ದರಿಂದ ಅವರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಜಿಲ್ಲಾಧಿಕಾರಿಗಳ ಅಧಿಕಾರ ವ್ಯಾಪ್ತಿಯೊಳಗೆ ಅವರಿಗೆ ಉಚಿತವಾಗಿ ಪಡಿತರ ವಿತರಿಸುವ ಮೂಲಕ ಅವರ ಸಂಸಾರದ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಮನವಿಯೊಂದಿಗೆ ಅರ್ಹರ ಹೆಸರು, ಮೊಬೈಲ್ ಸಂಖ್ಯೆ ಹಾಗೂ ಪಡಿತರ ವಿತರಣಾ ಅಂಗಡಿಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.