ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ

May 14, 2020

ಬೆಂಗಳೂರು ಮೇ 13 : ಮೂರನೆ ಹಂತದ ಲಾಕ್ಡೌನ್ ಮುಗಿಯುತ್ತಿದ್ದಂತೆ ಲವ್ ಯುವರ್ ನೆಟೀವ್ ಎಂಬ ಹೊಸ ಚಿಂತನೆಯೊಂದಿಗೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.
ಹೊಟೇಲ್ ಗಳನ್ನು ತೆರೆಯಲು ಅವಕಾಶ ಕೇಳಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಈ ಹೊಟೇಲ್ ಗಳು ಸೇವೆ ಆರಂಭಿಸಲು ಮನವಿ ಮಾಡಲಾಗಿದೆ. ಮೇ 17 ರ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ ಎಂದೂ ಸಚಿವರು ಹೇಳಿದರು.
ರಾಜ್ಯದಲ್ಲಿ ಕ್ರೀಡಾ ಇಲಾಖೆಯಡಿ ಬರುವ ಫಿಟ್ನೆಸ್ ಸೆಂಟರ್ ಗಳು, ಜಿಮ್ ಗಳು ಮತ್ತು ಗಾಲ್ಫ್ ಕ್ಲಬ್ ಚಟುವಟಿಕೆಗಳಿಗೆ ಅವಕಾಶ ಮಾಡಿ ಕೊಡುವುದಾಗಿ ಎಂದರು.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು.
ಇದೆ 17ರ ನಂತರ ರಾಜ್ಯದಲ್ಲಿ ಕ್ರೀಡಾ ಇಲಾಖೆಯಡಿ ಬರುವ ಫಿಟ್ನೆಸ್ ಸೆಂಟರ್ ಗಳು, ಜಿಮ್ ಗಳನ್ನ ತೆರೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದು, ಇದಕ್ಕೆ ಸಕಾರಾತ್ಮ ಪ್ರತಿಕ್ರಿಯೆ ದೊರಕಿದೆ ಎಂದು ಹೇಳಿದರು.

 

error: Content is protected !!