ಮಂಗಳೂರಿನಲ್ಲಿ ಮತ್ತೊಂದು ಸಾವು

14/05/2020

ಮಂಗಳೂರು ಮೇ 13 : ರಾಜ್ಯಕ್ಕೆ ಕೊರೋನಾಘಾತ ಮುಂದುವರೆದಿದ್ದು ದಕ್ಷಿಣ ಕನ್ನಡದಲ್ಲಿ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಬೋಳೂರಿನ 58 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಫಸ್ಟ್ ನ್ಯೂರೆ ಆಸ್ಪತ್ರೆಯಲ್ಲಿ ಮೆದುಳು ಸಂಬಂಧಿತ ಕಾಯಿಲೆಗೆ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ಇದೇ ಆಸ್ಪತ್ರೆಯ ಸ್ವೀಪರ್ ನಿಂದ ಮಹಿಳೆಗೆ ಸೋಂಕು ಹರಡಿತ್ತು. ಏಪ್ರಿಲ್ 20ರನ್ನು ಮಹಿಳೆಗೆ ಸೋಂಕು ತಗುಲಿದ್ದು ದೃಢಪಟ್ಟಿತ್ತು.
ನಂತರ ಆಕೆಯನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಮಂಗಳೂರಿನಲ್ಲಿ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಬೆಳಗ್ಗೆ ಕಲಬುರಗಿಯ 60 ವರ್ಷದ ವ್ಯಕ್ತಿಯೋರ್ವರು ಮೃತಪಟ್ಟಿದ್ದರು. ಇದರೊಂದಿಗೆ ರಾಜ್ಯದಲ್ಲಿ ಇಂದು ಇಬ್ಬರು ಕೊರೋನಾಗೆ ಬಲಿಯಾಗಿದ್ದಾರೆ.