ಕಾರ್ಮಿಕ ಫಲಾನುಭವಿಗಳ ಖಾತೆಗೆ ರೂ.5 ಸಾವಿರ

May 15, 2020

ಮಡಿಕೇರಿ ಮೇ 14 : ಕರ್ನಾಟಕ ಸರ್ಕಾರದ ಆದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯವರ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕ ಫಲಾನುಭವಿಗಳ ಖಾತೆಗೆ ಒಂದು ಬಾರಿ ಮಾತ್ರ ರೂ.5 ಸಾವಿರ ವನ್ನು ಡಿಬಿಟಿ ಮೂಲಕ ಜಮಾ ಮಾಡಲಾಗುವುದು.
ಅರ್ಜಿ ಸಲ್ಲಿಕೆ ವಿಧಾನ: ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಎಲ್ಲಾ ನೋಂದಾಯಿತ ಕಾರ್ಮಿಕರು ಆಯಾಯ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕಿದೆ. ದಾಖಲಾತಿಗಾಗಿ ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿರುವ ಬಗ್ಗೆ ಪಡೆದ ನೋಂದಾಯಿತ ಗುರುತಿನ ಚೀಟಿ ಪ್ರತಿ, ಆಧಾರ್ ಕಾರ್ಡ್‍ನ ಪ್ರತಿ, ಬ್ಯಾಂಕ್ ಅಕೌಂಟ್ ನಂಬರ್, ಐ.ಎಫ್.ಸಿ ಕೋಡ್, ಹೆಸರು, ವಿಳಾಸ ಇರುವ ಬ್ಯಾಂಕ್ ಪಾಸ್ ಪುಸ್ತಕದ ಪುಟದ ಸ್ಪಷ್ಟವಾಗಿ ಕಾಣುವ ಜೆರಾಕ್ಸ್ ಪ್ರತಿಯನ್ನು ಆಯಾಯ ತಾಲ್ಲೂಕಿನ ಹಿರಿಯ ಕಾರ್ಮಿಕ ನಿರೀಕ್ಷಕರು ಅಥವಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸಲ್ಲಿಸಬೇಕಿದೆ.
ಸಹಾಯಕ್ಕಾಗಿ ಸಂಪರ್ಕಿಸಬೇಕಾದ ಸಂಖ್ಯೆ : ಮಡಿಕೇರಿಯ ಹಿರಿಯ ಕಾರ್ಮಿಕ ನಿರ್ದೇಶಕರಾದ ಎಂ.ಎಂ.ಯತ್ನಟ್ಟಿ 9448642111, ಜರೀನಾ (7760065658) ಮತ್ತು 08272-225534, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲೂಕಿನಲ್ಲಿ ಕೆ.ಎನ್.ಲೀನಾ (9980344882) ಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.