ರೈತರಿಗೆ ಪರಿಹಾರ ಪ್ಯಾಕೇಜ್ ಪ್ರಕಟ

15/05/2020

ನವದೆಹಲಿ ಮೇ 14 : ಕೊರೋನಾ ವೈರಸ್ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ರೈತರು, ವಲಸೆ ಕಾರ್ಮಿಕರು ಮತ್ತು ಸಣ್ಣ ವ್ಯಾಪಾರಿಗಳಿಗಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ಪರಿಹಾರ ಪ್ಯಾಕೇಜ್‍ನ್ನು ಪ್ರಕಟಿಸಿದ್ದಾರೆ.
ಮೂರು ವಲಸೆ ಕಾರ್ಮಿಕರಿಗೆ, ಒಂದು ಮುದ್ರಾದೊಂದಿಗೆ ಶಿಶು ಸಾಲ, ಮತ್ತೊಂದು ರಸ್ತೆ ಬದಿಯ ವ್ಯಾಪಾರಿಗಳಿಗೆ, ಮತ್ತೊಂದು ಗೃಹ, 1 ಬುಡಕಟ್ಟು ಜನಾಂಗದ ಉದ್ಯೋಗ ಪೀಳಿಗೆಗೆ ಹಾಗೂ ಎರಡು ನಿರ್ಧಾರಗಳು ಸಣ್ಣ ರೈತರನ್ನು ಒಳಗೊಂಡಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಹಿತಿ ನೀಡಿದರು.
ಕಳೆದ ಮೂರು ತಿಂಗಳಿನಿಂದ ದೇಶದ ರೈತ ಸಮುದಾಯಕ್ಕೆ ಅನುಕೂಲವಾಗುವಂತ ಹಲವು ಯೋಜನೆಗಳನ್ನು ಘೋಷಿಸಲಾಗಿದ್ದು, ಸಣ್ಣ ರೈತರಿಗೆ 4 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಹೊಸದಾಗಿ 25 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ಮಂಜೂರು ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಸಕಾಲದಲ್ಲಿ ಸಾಲ ಮರುಪಾವತಿಸಿರುವ ರೈತರಿಗೆ ಮೇ 31ರವರೆಗೆ ಬಡ್ಡಿ ರಿಯಾಯಿತಿ ನೀಡಲಾಗುವುದು. ಸಣ್ಣ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡುವ ವ್ಯವಸ್ಥೆ ರೂಪಿಸಲಾಗುವುದು ಎಂದರು.