ಬಿಬಿಎಂಪಿ ಬಜೆಟ್ ಅನುದಾನ ಕಡಿತ

May 15, 2020

ಬೆಂಗಳೂರು ಮೇ 14 : ಕೊರೊನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬಿಬಿಎಂಪಿ ಬಜೆಟ್ ಅನುದಾನ ಕಡಿತಗೊಳಿಸಿ ಸರ್ಕಾರ ಅನುಮೋದನೆ ನೀಡಿದೆ.
ಒಟ್ಟು 254.35 ಕೋಟಿ ರೂ.ಗಳಷ್ಟು ಅನುದಾನ ಕಡಿತಗೊಳಿಸಿ ಬಿಬಿಎಂಪಿ ಬಜೆಟ್ ಗೆ ಸರ್ಕಾರ ಅನುಮೋದನೆ ನೀಡಿದೆ. ತಿಹಾಸದಲ್ಲೆ ಮೊದಲ ಬಾರಿ ಕಳೆದ ಮೇ 7 ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ ಮಾಡಲಾಗಿತ್ತು. ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ ಒಟ್ಟು 11,969.5 ಕೋಟಿ ರೂಪಾಯಿ ಮೊತ್ತದ ಆಯವ್ಯಯ ಮಂಡನೆ ಮಾಡಿದ್ದರು.
ಬಜೆಟ್ ನಲ್ಲಿ ದ 254.35 ಕೋಟಿಯಷ್ಟು ಕಡಿತಗೊಳಿಸಿದ ರಾಜ್ಯ ಸರ್ಕಾರ, ಉಳಿದ ಒಟ್ಟು @ 11,715.2 ಕೋಟಿ ರೂಪಾಯಿಗಳ ಮೊತ್ತಕ್ಕೆ ಅನುಮೋದನೆ ನೀಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜೊತೆಗೆ 2019-20ನೇ ಸಾಲಿನ ಪರಿಷ್ಕೃತ ಬಜೆಟ್ ಅಂಗೀಕರಿಸಿದೆ.