ರಾಜ್ಯ ಸರ್ಕಾರದ ವಿರುದ್ಧ ಎಂಎಲ್ ಸಿ ವೀಣಾಅಚ್ಚಯ್ಯ ಅಸಮಾಧಾನ

15/05/2020

ಮಡಿಕೇರಿ ಮೇ 15 : ಕೊರೋನಾ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಆರ್ಥಿಕ ಹಿನ್ನಡೆ ಉಂಟಾಗಿ ಜನರು ಹಣವಿಲ್ಲದೆ ಪರದಾಡುತ್ತಿರುವಾಗಲೇ ವಿವಿಧ ಕ್ಷೇತ್ರಗಳಲ್ಲಿ ತೆರಿಗೆ ಹೆಚ್ಚಳ ಮಾಡುತ್ತಿರುವ ಸರ್ಕಾರದ ಕ್ರಮ ಖಂಡನೀಯವೆಂದು ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮದ್ಯದ ಮೇಲಿನ ಸುಂಕವನ್ನು ದಿಢೀರ್ ಆಗಿ ಹೆಚ್ಚಿಸುವ ಮೂಲಕ ಜನರ ಮೇಲೆ ಹೊರೆ ಹಾಕಿ ಸರ್ಕಾರ ತಮಾಷೆ ನೋಡುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.