ಪೊಲೀಸ್ ಕಾನ್ಸ್‍ಟೆಬಲ್ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

15/05/2020

ಮಡಿಕೇರಿ ಮೇ.15 : ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇದ್ದ 79 ಸಿವಿಲ್ ಪೊಲೀಸ್ ಕಾನ್ಸ್‍ಟೆಬಲ್ (ಪುರುಷ ಮತ್ತು ಮಹಿಳೆ) ಹಾಗೂ 54 ಸಶಸ್ತ್ರ ಪೊಲೀಸ್ ಕಾನ್ಸ್‍ಟೆಬಲ್ ಹುದ್ದೆಯ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕೊಡಗು ಜಿಲ್ಲಾ ಪೊಲೀಸ್ ಕಾನ್ಸ್‍ಟೇಬಲ್ ನೇಮಕಾತಿ ಸಮಿತಿಯು ಮೇ 15 ರಂದು ತಯಾರಿಸಿ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಪ್ರಥಮ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಹಾಗೂ ದಾಖಲಾತಿ ಪರಿಶೀಲನೆಗಾಗಿ ನಿಗದಿತ ದಿನಾಂಕದಂದು ಹಾಜರಾಗಲು ಕರೆ ಪತ್ರವವನ್ನು ಅಂಚೆ ಮೂಲಕ ಕಳುಹಿಸಿಕೊಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ ಅವರು ತಿಳಿಸಿದ್ದಾರೆ.