ಕೊರೋನಾದೊಂದಿಗೆ ಬದುಕು ಕಲಿಯಬೇಕು

16/05/2020

ಬೆಂಗಳೂರು ಮೇ 15 : ಕಳೆದ ಕೆಲ ದಿನಗಳಿಂದ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಸೋಂಕು ಸುಲಭದಲ್ಲಿ ನಿರ್ಮೂಲನೆ ಆಗಲಾರದು ಎಂದು ವಿಶ್ವಸಂಸ್ಥೆ ಸಹ ಖಚಿತ ಪಡಿಸಿದೆ. ಹೀಗಾಗಿ ನಾವು ಇದರ ಜೊತೆಗೆ ಬದುಕುವುದನ್ನು ಕಲಿಯಬೇಕು ಸಚಿವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಹಂತದ ಲಾಕ್ ಡೌನ್ ಸಡಿಲಿಕೆ ಅದ ಮೇಲೆ ಇದೀಗ ನಾಲ್ಕನೇ ಹಂತದ ಲಾಕ್ ಡೌನ್‍ಗೆ ಹೋಗುತ್ತಿದ್ದೇವೆ. ಎಲ್ಲಾ ಕಡೆಯಿಂದ ನಾವು ನಮ್ಮ ರಾಜ್ಯದವರನ್ನು ರಾಜ್ಯಕ್ಕೆ ಕರೆತರುತ್ತಿದ್ದೇವೆ. ಸೊಂಕು ಹೆಚ್ಚಿರುವ ದೇಶದಿಂದಲೂ ಭಾರತೀಯರು ಬಂದಿದ್ದಾರೆ. ಇವರ ಮೂಲಕ ಸೋಂಕು ಹರಡದಂತೆ ಬಹಳ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.
ಸೋಂಕಿತರ ಚಿಕಿತ್ಸೆಗಾಗಿ ಒಂದು ಲಕ್ಷ ಹಾಸಿಗೆ ವ್ಯವಸ್ಥೆ ರಾಜ್ಯದಲ್ಲಿ ಮಾಡಿಕೊಳ್ಳಲಾಗಿದೆ. ಜನವರಿಂದ ಪ್ರಾರಂಭವಾಗಿ ಮೇ ತಿಂಗಳವರೆಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1000ಕ್ಕೆ ಏರಿದೆ. ಬೇರೆ ರಾಷ್ಟ್ರ, ರಾಜ್ಯಕ್ಕೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ಪ್ರಮಾಣವಾಗಿದೆ. ಕೇರಳ ರಾಜ್ಯದವರ ಜೊತೆ ಅನೇಕ ವಿಚಾರಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡಿದ್ದೇವೆ. ಅವರು ಹೊರ ದೇಶದಿಂದಬಂದರೆ ಏನು ಮಾಡುವುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಪ್ರಕೃತಿ ವಿಕೋಪ ಎರಡು ಬಾರಿ ನಿಭಾಯಿಸಿದ್ದ ಕೇರಳ ಸರ್ಕಾರ ಇದೀಗ ಸೋಂಕು ಎದುರಿಸಲು ಸಿದ್ಧವಾಗಿದೆ. ಇದುವರೆಗೂ ಕೇರಳ ಸರ್ಕಾರ 30 ಸಾವಿರ ಟೆಸ್ಟ್ ಮಾಡಿದೆ. ನಮ್ಮಲ್ಲಿ ಅದಕ್ಕಿಂತ ಹೆಚ್ಚು ಪರೀಕ್ಷೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಸೋಂಕು ನಿಯಂತ್ರಣ ಮಾಡುವಲ್ಲಿ ಮುಂದಿದೆ ಎಂದು ಸುಧಾಕರ್ ಹೇಳಿದರು.