ಬಡ್ತಿ ಹೊಂದಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಭಿನಂದನೆ

16/05/2020

ಮಡಿಕೇರಿ ಮೇ 16 : ಕೊಡಗು ಜಿಲ್ಲೆಯ ಪೊಲೀಸ್ ಘಟಕದಲ್ಲಿ ಎ.ಎಸ್.ಐ ಮತ್ತು ಹೆಚ್.ಸಿ ಹುದ್ದೆಗಳಿಗೆ ಮುಂಬಡ್ತಿ ಹೊಂದಿ ಜಿಲ್ಲೆಯ ವಿವಿಧ ಠಾಣೆಗಳಿಗೆ ನಿಯೋಜನೆಗೊಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮುಂಬಡ್ತಿ ಪ್ರಧಾನ ಮಾಡಿ ಅಭಿನಂದಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ. ಪನ್ನೇಕರ್ ಅವರು ಮುಂಬಡ್ತಿ ಹೊಂದಿದ ಸಿಬ್ಬಂದಿಗಳಿಗೆ ಶುಭ ಕೋರಿದರು.