ಓರ್ವ ಉಗ್ರ ಬಲಿ : ಯೋಧ ಹುತಾತ್ಮ

18/05/2020

ಜಮ್ಮು ಮೇ 17 : ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ.
ಗುಂಡ್ನಾ ದೋಡಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು.
ಈ ವೇಳೆ ಉಗ್ರರು ಭದ್ರತಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಕಾರ್ಯಾಚರಣೆ ಚುರುಕುಗೊಳಿಸಿರುವ ಸೇನಾಪಡೆಗ ಕಾರ್ಯಾಚರಣೆಯನ್ನು ಎನ್’ಕೌಂಟರ್ ಆಗಿ ಮಾರ್ಪಡಿಸಿ ಉಗ್ರನೋರ್ವನನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ಇನ್ನೂ ಇಬ್ಬರು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದು ತಿಳಿದು ಬಂದಿದೆ.