ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1147

18/05/2020

ಬೆಂಗಳೂರು ಮೇ 17 : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 55 ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ.
ಉಡುಪಿಯ 54 ವರ್ಷದ ನಿವಾಸಿ ಮೇ 14ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ಅವರ ಪರೀಕ್ಷಾ ವರದಿಯಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಇವರು ಹೃದಯ ಸಂಬಂಧಿ ಕಾಯಿಲೆಯಿಂದ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದರಿಂದ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 37ಕ್ಕೇರಿಕೆಯಾಗಿದೆ. ಒಟ್ಟು 509 ಜನರು ಗುಣಮುಖರಾಗಿದ್ದಾರೆ.
ಇದಲ್ಲದೆ ಮಂಡ್ಯದಲ್ಲಿ 22, ಕಲಬುರ್ಗಿದಲ್ಲಿ 10, ಹಾಸನದಲ್ಲಿ 6, ಯಾದಗಿರಿದಲ್ಲಿ 3, ಕೋಲಾರದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಧಾರವಾಡದಲ್ಲಿ 4, ಶಿವಮೊಗ್ಗದಲ್ಲಿ 2, ವಿಜಯಪುರದಲ್ಲಿ 1ಪ್ರಕರಣಗಳು ವರದಿಯಾಗಿದೆ.
ಮಂಡ್ಯದಲ್ಲಿ ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ 22 ಕೊರೋನಾ ಸೋಂಕು ಪ್ರಕರಣ ದಾಖಲಾಗಿದ್ದು ಜಿಲ್ಲೆಯಲ್ಲಿ ಒಟ್ತಾರೆ ಸೋಂಕಿತರ ಸಂಖ್ಯೆ 72ಕ್ಕೆ ತಲುಪಿದೆ. ಕೊರೊನಾ ವೈರಸ್ ನಿಂದಾಗಿ ವಿಶ್ವಾದಲ್ಲಿ 46.34 ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದು, 3.11 ಲಕ್ಷಕ್ಕೂ ಹೆಚ್ಚು ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ.