ಕೊಡಗು ಜಿಲ್ಲೆಯ ಮಳೆ ವಿವರ

May 18, 2020

ಮಡಿಕೇರಿ ಮೇ.18  : ಮುಂಗಾರು ಆರಂಭವಾಗುವುದಕ್ಕೂ ಮೊದಲೇ ಭಾನುವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭವಾಗುವ ಲಕ್ಷಣ ಕಾಣುತ್ತಿದೆ. ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ ಬೆಳಗ್ಗೆ 8 ಗಂಟೆ ವರೆಗೆ ಮಳೆಯಾಗಿ ತಂಪಾದ ವಾತಾವರಣ ನಿರ್ಮಾಣವಾಗಿದೆ.
ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 40.77 ಮಿ.ಮೀ ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 82.4 ಮಿ.ಮೀ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 12.75 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 21.15 ಮಿ.ಮೀ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 51.2, ನಾಪೋಕ್ಲು 37.2, ಸಂಪಾಜೆ 111.2, ಭಾಗಮಂಡಲ 130, ವಿರಾಜಪೇಟೆ ಕಸಬಾ 10.8, ಹುದಿಕೇರಿ 2, ಪೊನ್ನಂಪೇಟೆ 7.2, ಅಮ್ಮತ್ತಿ 7, ಬಾಳೆಲೆ 24, ಸೋಮವಾರಪೇಟೆ ಕಸಬಾ 314, ಶನಿವಾರಸಂತೆ 19.4, ಶಾಂತಳ್ಳಿ 66.2, ಕೊಡ್ಲಿಪೇಟೆ 20.4, ಕುಶಾಲನಗರ 15.8, ಸುಂಟಿಕೊಪ್ಪ 10.1 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಇನ್ನೆರೆಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸುದ್ದಿಗೋಷ್ಠಿ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.