ಹೆಚ್ಚಾಯಿತು ಪ್ರಧಾನಿ ಮೋದಿ ಜನಪ್ರಿಯತೆ

May 19, 2020

ನ್ಯೂಯಾರ್ಕ್ ಮೇ 18 : ಮಾರಕ ಕೊರೋನಾ ವೈರಸ್ ಅಬ್ಬರದ ನಡುವೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಕೂಡ ಗಗನಕ್ಕೇರುತ್ತಿದೆ ಎಂದು ಅಮೆರಿಕದ ಖ್ಯಾತ ಆಂಗ್ಲ ದೈನಿಕ ನ್ಯೂಯಾರ್ಕ್ ಟೈಮ್ಸ್ ಹೇಳಿದೆ.
ಮಾರಕ ಕೊರೋನಾ ವೈರಸ್ ನಿಂದಾಗಿ ಇಡೀ ಜಗತ್ತು ಸಂಕಷ್ಟಕ್ಕೆ ಸಿಲುಕಿದ್ದು, ಈ ಹೊತ್ತಿನಲ್ಲಿ ಸಂಕಷ್ಟದಿಂದ ಹೊರ ಬರಲು ವಿಶ್ವದ ಎಲ್ಲ ದೇಶಗಳೂ ಹರಸಾಹಸ ಪಡುತ್ತಿವೆ. ಈ ಪ್ರಕ್ರಿಯೆಯಲ್ಲಿ ಇತರೆ ದೇಶಗಳ ನಾಯಕರಿಗೆ ಹೋಲಿಕೆ ಮಾಡಿದರೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹೆಚ್ಚು ಜನಪ್ರಿಯತೆ ಪಡೆದಿದೆ. ಕೊವಿಡ್-19 ಸಂಕಷ್ಟ ಕಾಲದಲ್ಲಿ ಒಂದಿಡೀ ದೇಶ ಓರ್ವ ವ್ಯಕ್ತಿಯನ್ನು ಹಿಂಬಾಲಿಸುತ್ತಿದೆ ಎಂದರೆ ಅದು ನರೇಂದ್ರ ಮೋದಿ ಮಾತ್ರ. ಕೊರೋನಾ ಕಾಲದಲ್ಲಿ ಪ್ರಧಾನಿ ಮೋದಿ ಹೆಸರು ಹೆಚ್ಚು ಖ್ಯಾತಿ ಗಳಿಸುತ್ತಿದ್ದು, ಒಂದು ವೇಳೆ ಭಾರತ ಕೊರೋನಾ ಯುದ್ಧ ಗೆದ್ದರೆ ಪ್ರಧಾನಿ ಮೋದಿ ಹೆಸರು ಜನಪ್ರಿಯತೆಯ ಉತ್ತುಂಗಕ್ಕೆ ಏರಲಿದೆ ಎಂದು ನ್ಯೂಯಾರ್ಕ್ ಟೈಮ್ಸ್ ಹೇಳಿದೆ.

 

 

error: Content is protected !!