ಮಳೆ ಆರ್ಭಟಕ್ಕೆ ಒಂದು ಬಲಿ

19/05/2020

ಮಂಗಳೂರು ಮೇ 18 : ನಗರದಲ್ಲಿ ಸೋಮವಾರ ಮುಂಜಾನೆ ಗುಡುಗು ಸಿಡಿಲು, ಗಾಳಿ ಸಹಿತ ಭಾರಿ ಮಳೆ ಸುರಿಯಿತು. ಬೆಳಗ್ಗೆ 5.00 ಗಂಟೆ ಸುಮಾರಿಗೆ ಆರಂಭಗೊಂಡು 9.30ರ ತನಕವೂ ಜೋರಾಗಿ ಮಳೆಯಾಯಿತು. ಅಲ್ಲಲ್ಲಿ ಹಾನಿ ಸಂಭವಿಸಿದರೆ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
ಜನ ಜೀವನ ತೀವ್ರ ಬಾಧಿತವಾಯಿತು. ಬೆಳಗ್ಗೆ ಮೋಡಗಳು ದಟ್ಟೈಸಿದ್ದ ಕಾರಣ ಬೆಳಕು ಮಬ್ಬಾಗಿತ್ತು. ವಾಹನಗಳು ಹೆಡ್‍ಲೈಟ್ ಹಾಕಿಕೊಂಡೇ ಸಂಚರಿಸಿದವು. ಕರಾವಳಿ ಜಿಲ್ಲೆಯಲ್ಲಿ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿ ಯುವಕನೊಬ್ಬ ಸಿಡಿಲು ಬಡಿದು ಸಾವಿಗೀಡಾಗಿದ್ದಾನೆ. ಮೃತನನ್ನು ಭರತ್ ಎಂದು ಗುರುತಿಸಲಾಗಿದೆ.
ತಕ್ಷಣ ಯುವಕನನ್ನು ಆಸ್ಪತ್ರೆಗೆ ಕರೆತರಲಾಯಿತಾದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ.