ಹೊರ ಜಿಲ್ಲೆಗಳಿಗೆ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರ ಆರಂಭ : ಮಡಿಕೇರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ

19/05/2020

ಮಡಿಕೇರಿ ಮೇ 19 : ರಾಜ್ಯದಲ್ಲಿ ನಾಲ್ಕನೇ ಹಂತದ ಲಾಕ್ ಡೌನ್ ಜಾರಿಯಲ್ಲಿದ್ದರೂ ಜಿಲ್ಲೆಯಿಂದ ಜಿಲ್ಲೆಗೆ ಸಂಚರಿಸಲು ಕೆಎಸ್ ಆರ್ ಟಿಸಿ ಬಸ್ ಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದರಿಂದ ಮಡಿಕೇರಿ ಬಸ್ ನಿಲ್ದಾಣದಿಂದಲೂ ಬೆಳಗ್ಗಿನಿಂದಲೇ ಬಸ್ ಸಂಚಾರ ಆರಂಭಗೊಂಡಿತು.
ತಮ್ಮ ತಮ್ಮ ಊರುಗಳಿಗೆ ತೆರಳಲು ಜನ ಮುಗಿ ಬಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲೇ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಕಳುಹಿಸುತ್ತಿದ್ದಾರೆ. ಜನ ಸಾಲುಗಟ್ಟಿ ನಿಂತು ಸಹಕರಿಸುತ್ತಿದ್ದಾರೆ.