ಆಯುಷ್ಮಾನ್ ಭಾರತ ಯೋಜನೆಯ ಲಾಭ ಪಡೆಯಲು ಪ್ರತಾಪ್ ಸಿಂಹ ಮನವಿ

21/05/2020

ಮಡಿಕೇರಿ‌ ಮೇ 21 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಇಲ್ಲಿಯವರೆಗೆ ಆಯುಷ್ಮಾನ್ ಭಾರತ ಯೋಜನೆಯ ಮೂಲಕ ಒಂದು ಕೋಟಿಗೂ ಅಧಿಕ ರೋಗಿಗಳಿಗೆ ಉಚಿತ ಚಿಕಿತ್ಸೆ ದೊರೆತ್ತಿದೆ. ರೂ.12.46 ಕೋಟಿಗೂ ಅಧಿಕ ಇ-ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ರೋಗಗಳಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.