ಕೊಡಗು ಜಿಲ್ಲಾ ಕಾಂಗ್ರೆಸ್‍ನಿಂದ ರಾಜೀವ್ ಗಾಂಧಿ ಪುಣ್ಯತಿಥಿ ಆಚರಣೆ

ಮಡಿಕೇರಿ ಮೇ 21 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ 29ನೇ ಪುಣ್ಯತಿಥಿಯನ್ನು ಆಚರಿಸಲಾಯಿತು.
ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ರಾಜೀವ್ ಗಾಂಧಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್ ಕುಮಾರ್, ದೇಶಕ್ಕೆ ರಾಜೀವ್ ಗಾಂಧಿ ಅವರ ಕೊಡುಗೆ ಅಪಾರ. ದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ ಅವರು ಸ್ಪಷ್ಟ ಗುರಿಯನ್ನು ಹೊಂದಿದ್ದರು. ಅವರ ದೂರದೃಷ್ಟಿ, ಸಾಧನೆ ಎಲ್ಲರಿಗೂ ಮಾದರಿ. ಪ್ರತಿಯೋಬ್ಬರು ರಾಜೀವ್ ಗಾಂಧಿ ಅವರ ಆದರ್ಶ ತತ್ವವನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಹಿರಿಯ ಕಾಂಗ್ರೆಸ್ ನಾಯಕ ಟಿ.ಪಿ ರಮೇಶ್ ಮಾತನಾಡಿ, ಚಿಕ್ಕವಯಸ್ಸಿನಲ್ಲಿ ಗುರುತರ ಜವಾಬ್ದಾರಿಯನ್ನು ಹೊತ್ತು ಯಶಸ್ಸು ಆದ ರಾಜೀವ್ ಗಾಂಧಿಯವರ ಬಗ್ಗೆ ವಿವರಿಸಿದರು.
ಈ ಸಂದರ್ಭ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಎಂ.ಎ ಉಸ್ಮಾನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಅಪ್ರು, ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಜ್ಜಳ್ಳಿ ರವಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕ ತೆನ್ನೀರ್ ಮೈನಾ, ನಗರಸಭಾ ಮಾಜಿ ಸದಸ್ಯ ಟಿ.ಹೆಚ್ ಉದಯಕುಮಾರ್, ಖಲೀಲ್ ಭಾಷಾ, ಯುವ ಕಾಂಗ್ರೆಸ್ಸಿನ ದೇವ್ ಕುಶಾಲನಗರ, ಅಂಬೆಕಲ್ಲು ನವೀನ್ ಕುಶಾಲಪ್ಪ, ಬಿ.ಕೆ ಗಂಗಾಧರ, ಮಡಿಕೇರಿ ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆರ್.ಪಿ, ಚಂದ್ರಶೇಖರ್, ಸೈಯದ್ ಭಾಷಾ ನೆಲ್ಯಹುದಿಕೇರಿ, ಮಡಿಕೇರಿ ನಗರ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಪ್ರಮುಖರಾದ ಬಿ.ಎಸ್. ರಘುನಾಥ್, ಚಂದ್ರಶೇಖರ ಬೊಳುಗಲ್ಲು, ವಸಂತ ಸಿದ್ದಾಪುರ ಹಾಗೂ ಇತರರು ಹಾಜರಿದ್ದರು.
ಕಾರ್ಯಕ್ರಮವನ್ನು ಪ್ರಧಾನ ಕಾರ್ಯದರ್ಶಿ ವಿ.ಪಿ ಸುರೇಶ್ ಸ್ವಾಗತಿಸಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ವಂದಿಸಿದರು.