‘ಭಯೋತ್ಪಾದನಾ ವಿರೋಧಿ ದಿನ’ : ಪ್ರಮಾಣ ವಚನ ಸ್ವೀಕಾರ

22/05/2020

ಮಡಿಕೇರಿ ಮೇ 21 : ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಉಪಸ್ಥಿತಿಯಲ್ಲಿ ಗುರುವಾರ ‘ಭಯೋತ್ಪಾದನಾ ವಿರೋಧಿ’ ದಿನದ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು.
ಪ್ರತಿಜ್ಞಾ ವಿಧಿ ಬೋಧಿಸಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮಥ್ರ್ಯದಿಂದ ಎದುರಿಸಬೇಕೆಂದು ಕರೆ ನೀಡಿದರು.
ನಮ್ಮ ಸಹ ಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಅವರು ಪ್ರತಿಜ್ಞೆಯನ್ನು ಬೋಧಿಸಿದರು.