ಎಫ್‍ಐಆರ್ ವಾಪಸ್ ಪಡೆಯಲು ಒತ್ತಾಯ

May 22, 2020

ಬೆಂಗಳೂರು ಮೇ 21 : ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧ ದಾಖಲಿಸಿರುವ ಎಫ್‍ಐಆರ್ ವಾಪಸ್ ಪಡೆಯಬೇಕು ಹಾಗು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದೆ.
ಎಐಸಿಸಿ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಎಫ್‍ಐಆರ್ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾಗೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿತು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರು ಸಾಥ್ ನೀಡಿದ್ದರುಸೋನಿಯಾ ಗಾಂಧಿ ವಿರುದ್ಧ ಪ್ರಕರಣ ಕೈಬಿಡಬೇಕು, ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಆಗ್ರಹಿಸಿತು.
ಮುಖ್ಯಮಂತ್ರಿ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಶಿವಮೊಗ್ಗದ ಪ್ರವೀಣ್ ಕುಮಾರ್ ಎಂಬ ವಕೀಲ, ಪೊಲೀಸ್ ಅಧಿಕಾರಿಯೊಬ್ಬರ ಜೊತೆ ಸೇರಿ ಒಂದು ದೂರು ಕೊಟ್ಟು ಸೋನಿಯಾಗಾಂಧಿ ವಿರುದ್ಧ ಎಫ್‍ಐಆರ್ ದಾಖಲು ಮಾಡಿದ್ದಾರೆ, ಇದು ಸೂಕ್ಷ್ಮ ವಿಚಾರ. ಇಡೀ ದೇಶದಲ್ಲೇ ಸಂಚಲವನ್ನು ಉಂಟುಮಾಡುವ ವಿಚಾರವಾಗಿದೆ. ದ್ವೇಷದ ಮನೋಭಾವ, ಅಧಿಕಾರ ದುರುಪಯೋಗದಿಂದ ಇದು ನಡೆದಿದೆ ಎಂದು ಹರಿಹಾಯ್ದರು.