ಸಂತ್ರಸ್ತರ ಮನೆಗಳು ಉತ್ತಮ ಗುಣಮಟ್ಟದ್ದಾಗಿದೆ : ಉಸ್ತುವಾರಿ ಸಚಿವ ವಿ.ಸೋಮಣ್ಣ ಸ್ಪಷ್ಟನೆ

ಮಡಿಕೇರಿ ಮೇ.22 : ಅತಿವೃಷ್ಠಿಯಿಂದ ಮನೆ ಕಳೆದುಕೊಂಡವರಿಗೆ ನಿರ್ಮಾಣವಾಗಿರುವ ಮನೆಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದು, ಸಂತ್ರಸ್ತರಿಗೆ ಉತ್ತಮ ಮನೆಗಳನ್ನು ನೀಡುತ್ತಿರುವುದಾಗಿ ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು.
ಶುಕ್ರವಾರ ಜಿಲ್ಲೆಯ ಜಂಬೂರು ಮತ್ತು ಮದೆ ಗ್ರಾಮಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ನಿರ್ಮಿಸಿರುವ ಮನೆಗಳನ್ನು ವೀಕ್ಷಣೆ ಮಾಡಿ ಅವರು ಮಾತನಾಡಿದರು.
ಜಂಬೂರು ಮತ್ತು ಮದೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಮನೆಗಳು ಮಾದರಿ ಬಡಾವಣೆಯಾಗಿ ರೂಪಗೊಂಡಿದ್ದು, ಗುಣಮಟ್ಟದಿಂದ ಕೂಡಿದೆ ಎಂದು ಸಚಿವರು ತಿಳಿಸಿದರು.
ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರವು ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಸರ್ಕಾರವು ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಾಣ ಮಾಡಿ ಸಂತ್ರಸ್ತರಿಗೆ ಹಸ್ತಾಂತರ ಮಾಡುತ್ತಿದ್ದು, ಇಂತಹ ಉತ್ತಮ ಕೆಲಸಕ್ಕೆ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಸಂಸದ ಪ್ರತಾಪ್ ಸಿಂಹ, ಸುನಿಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ ಹರೀಶ್, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ.ವಿ.ರಾಮ್ ಪ್ರಸಾದ್ ಮನೋಹರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಇತರರು ಹಾಜರಿದ್ದರು.