ದರ ಹೆಚ್ಚಿಸಿ ಖಾಸಗಿ ಬಸ್ ಸಂಚಾರ

May 23, 2020

ರಾಯಚೂರು ಮೇ 22 : ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಖಾಸಗಿ ಬಸ್ ಗಳ ಸೇವೆ ಆರಂಭವಾಗಲಿದ್ದು, ಶೇ.15ರಷ್ಟು ಮಾತ್ರ ದರ ಹೆಚ್ಚಿಸಿ ಬಸ್ ಓಡಿಸಲು ಅನುಮತಿ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಶುಕ್ರವಾರ ರಾಯಚೂರಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಮಾಹಿತಿ ನೀಡಿದ ಅವರು, ‘ಎರಡು ದಿನಗಳಲ್ಲಿ ಖಾಸಗಿ ಬಸ್‍ಗಳ ಸಂಚಾರ ಕೂಡಾ ಆರಂಭವಾಗಲಿವೆ. ಶೇ 15 ರಷ್ಟು ದರ ಏರಿಕೆಗೆ ಅವಕಾಶ ನೀಡಲಾಗಿದೆ. ಈ ಸಂಬಂಧ ಖಾಸಗಿ ವಾಹನಗಳ ಮಾಲೀಕರ ಸಂಘದಿಗೆ ಸಭೆ ನಡೆದಿದ್ದು, ಅವರ ಶೇ 50ರಷ್ಟು ದರ ಏರಿಕೆ ಬೇಡಿಕೆ ತಿರಸ್ಕರಿಸಲಾಗಿದೆ. ಸೋಂಕು ತಡೆಯಲು ಸರ್ಕಾರಿ ಬಸ್‍ಗಳಲ್ಲಿ ಅನುಸರಿಸುವ ಎಲ್ಲಾ ನಿಯಮಗಳನ್ನು ಖಾಸಗಿ ಬಸ್‍ಗಳಲ್ಲಿಯೂ ಅನುಸರಿಸಬೇಕು. ಕೆಂಪು ವಲಯ ಹಾಗೂ ಬಫರ್ ಜೋನ್ ಪ್ರದೇಶಗಳ ಪ್ರಯಾಣಿಕರನ್ನು ಕರೆದೊಯ್ಯದಂತೆ ತಿಳಿಸಲಾಗಿದೆ’ ಎಂದು ಹೇಳಿದರು.
ಅಂತೆಯೇ ‘ಸೇವಾ ಮನೋಭಾವ ಇಟ್ಟುಕೊಂಡು ನಷ್ಟವಾದರೂ ಸರ್ಕಾರಿ ಬಸ್ ಸಂಚಾರ ಆರಂಭಿಸಿದ್ದೇವೆ. ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿಗೆ ಅವಕಾಶ ನೀಡುವುದಿಲ್ಲ. ಖಾಸಗಿಯವರ ಟ್ಯಾಕ್ಸ್ ಮನ್ನಾ ಮಾಡಲಾಗಿದೆ. ರಾಜ್ಯಸರ್ಕಾರ ಎಲ್ಲರಿಗೂ ಸಾರಿಗೆ ಸೌಲಭ್ಯ ಕೊಡಲು ತೀರ್ಮಾನಿಸಿದೆ ಎಂದರು.

 

 

 

error: Content is protected !!