ಶೂನ್ಯ ಬಡ್ಡಿದರದಲ್ಲಿ ರೂ. 3 ಲಕ್ಷ ಕೃಷಿ ಸಾಲ
23/05/2020

ಮಡಿಕೇರಿ ಮೇ 23 : ರಾಜ್ಯದ ರೈತರಿಗೆ ಕೃಷಿ ಪತ್ತಿನ ಸಹಕಾರ ಸಂಘಗಳು ಶೂನ್ಯ ಬಡ್ಡಿದರದಲ್ಲಿ 3 ಲಕ್ಷದವರೆಗೆ ಅಲ್ಪಾವಧಿ ಕೃಷಿ ಸಾಲ ನೀಡಲು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಸಹಕಾರ ಇಲಾಖೆ ಜಂಟಿ ಕಾರ್ಯದರ್ಶಿ ಹಾಗೂ ವಿಶೇಷ ಕರ್ತವ್ಯಾಧಿಕಾರಿ ಕೆ.ಎಂ. ಆಶಾ ಆದೇಶ ಹೊರಡಿಸಿದ್ದಾರೆ.
ಅಲ್ಪಾವಧಿ ಸಾಲವನ್ನು ರೈತರಿಗೆ ನೀಡಲು ಕೆಲ ಷರತ್ತುಗಳನ್ನು ವಿಧಿಸಿದ್ದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಸ್ಥೆಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಟಿಬೇಟಿಯನ್ ಸಹಕಾರ ಸಂಸ್ಥೆಗಳು, ಕೃಷಿ ಮತ್ತು ಕೃಷಿ ಸಂಬಂಧಿತ ಅಲ್ಪಾವಧಿ ಸಾಲವನ್ನು ನೀಡುತ್ತಿರುವ ಲ್ಯಾಂಪ್ಸ್ ಸಹಕಾರ ಸಂಘಗಳು, ಪಿಕಾರ್ಡ್ ಬ್ಯಾಂಕುಗಳು ಸಾಲವನ್ನು ನೀಡಬಾಹುದಾಗಿದೆ.