ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ಪೂರೈಸಲು ಒತ್ತಾಯ

23/05/2020

ಮಡಿಕೇರಿ ಮೇ 23 : ಕಾಫಿ ಬೆಳೆಗಾರರ 10ಅಶ್ವಶಕ್ತಿ(ಹೆಚ್‍ಪಿ)ವರೆಗಿನ ಪಂಪ್‍ಸೆಟ್‍ಗಳಿಗೆ ಇತರ ಬೆಳೆಗಾರರಂತೆಯೇ ಉಚಿತ ವಿದ್ಯುತ್ ನೀಡಬೇಕು ಎಂದು ಬೆಳೆಗಾರರ ಒಕ್ಕೂಟ ಮನವಿ ಮಾಡಿದೆ. ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ರೈತರು ಸಲ್ಲಿಸಿರುವ ಅರ್ಜಿಗಳು ಸಕಾಲದಲ್ಲಿ ವಿಲೇವಾರಿಯಾಗದೆ ರೈತರು ಸಂಕಷ್ಟ ಅನುಭವಿಸುವಂತಾಗಿದ್ದು, ರೈತರ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದೆ.