ಮುಖ್ಯಮಂತ್ರಿಗಳ ಬಳಿಗೆ ಬೆಳೆಗಾರರ ನಿಯೋಗ

23/05/2020

ಮಡಿಕೇರಿ ಮೇ 23 : ಕೊಡಗಿನ ಬೆಳೆಗಾರರ ಸಂಕಷ್ಟವನ್ನು ಸರ್ಕಾರದ ಮುಂದಿಡಲು ಮುಖ್ಯಮಂತ್ರಿಗಳ ಬಳಿಗೆ ಬೆಳೆಗಾರರ ನಿಯೋಗ ಕರೆದೊಯ್ಯುವುದಾಗಿ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿಗೆ ಬೆಳೆಗಾರರನ್ನು ಕರೆದೊಯ್ಯುವುದರೊಂದಿಗೆ ಕಳೆದ ಮೂರು ವರ್ಷಗಳಿಂದ ಜಿಲ್ಲೆಯ ಬೆಳೆಗಾರರು ಅನುಭವಿಸುತ್ತಿರುವ ಕಷ್ಟ, ನಷ್ಟಗಳ ಬಗ್ಗೆ ಮನವರಿಕೆ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಗಮನ ಸೆಳೆಯುವ ಭರವಸೆಯನ್ನು ಕೂಡ ನೀಡಿದ್ದಾರೆ.