ಚೇತರಿಸಿಕೊಳ್ಳಲಾಗದ ಸ್ಥಿತಿಯಲ್ಲಿ ಕೊಡಗಿನ ಹೋಂಸ್ಟೇಗಳು

23/05/2020

ಮಡಿಕೇರಿ ಮೇ 23 : ಕೊಡಗಿನ ಹೋಂಸ್ಟೇಗಳು ಕರ್ನಾಟಕದ ಪ್ರವಾಸೋದ್ಯಮಕ್ಕೆ ಗಮನಾರ್ಹವಾದ ಆರ್ಥಿಕ ಕೊಡುಗೆ ನೀಡುತ್ತಿದ್ದು, ಕಳೆದ ಎರಡು ವರ್ಷಗಳಲ್ಲಿ ಪ್ರಾಕೃತಿಕ ವಿಕೋಪದಿಂದಾಗಿ ಪ್ರವಾಸಿಗರಿಲ್ಲದೆ ಹೋಂಸೇಗಳು ಸಂಕಷ್ಟ ಎದುರಿಸುತ್ತಿವೆ. ಇದೀಗ ಕೊರೋನಾ ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ಹೋಂಸ್ಟೇ ಉದ್ಯಮದ ನೆರವಿಗೆ ರಾಜ್ಯ ಸರ್ಕಾರ ಮುಂದಾಗಬೇಕು, ಇಲ್ಲದಿದ್ದಲ್ಲಿ ಚೇತರಿಸಿಕೊಳ್ಳಲು ಸಾಧ್ಯವೇ ಇಲ್ಲವೆಂದು ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಅನಂತಶಯನ ಅಭಿಪ್ರಾಯಪಟ್ಟಿದ್ದಾರೆ.