ನಾವು ಸಂತ್ರಸ್ತರ ಪರವಾಗಿದ್ದೇವೆ : ನಮ್ಮ ಕೊಡಗು ತಂಡ ಸ್ಪಷ್ಟನೆ

23/05/2020

ಮಡಿಕೇರಿ ಮೇ 23 : ಮಳೆಹಾನಿ ಸಂತ್ರಸ್ತರಿಗಾಗಿ ನಿರ್ಮಿಸಲಾಗಿರುವ ನೂತನ ಮನೆಗಳ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿದ ಕಾರಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದ ಬಗ್ಗೆ ನಮ್ಮ ಕೊಡಗು ತಂಡ ಬೇಸರ ವ್ಯಕ್ತಪಡಿಸಿದೆ. ನಾವು ಸಂತ್ರಸ್ತರ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆಯೇ ಹೊರತು ಯಾವುದೇ ಜಾತಿ, ಪಂಗಡ, ಪಕ್ಷದ ಪರವಾಗಿ ಕೆಲಸ ಮಾಡುತ್ತಿಲ್ಲವೆಂದು ತಂಡದ ಅಧ್ಯಕ್ಷ ನೌಶದ್ ಸ್ಪಷ್ಟಪಡಿಸಿದ್ದಾರೆ.