361 ಮಂದಿಯ ಪ್ರಯೋಗಾಲಯ ಪರೀಕ್ಷೆಯ ವರದಿಯ ನಿರೀಕ್ಷೆಯಲ್ಲಿದೆ ಕೊಡಗು ಕೋವಿಡ್ ಆಸ್ಪತ್ರೆ

May 23, 2020

ಮಡಿಕೇರಿ ಮೇ 23 : ಕೊರೋನಾ ಸೋಂಕು ಹರಡದಂತೆ ಜಿಲ್ಲಾಡಳಿತ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಮುಂದುವರೆಸಿದ್ದು, ಇತರ ದೇಶದಿಂದ ಬಂದ 13 ಹಾಗೂ ಇತರ ರಾಜ್ಯದ 489 ಸೇರಿ ಒಟ್ಟು 502 ಮಂದಿಯನ್ನು ಸಂಪರ್ಕ ತಡೆಯಲ್ಲಿಡಲಾಗಿದೆ.
ಇಲ್ಲಿಯವರೆಗೆ ಒಟ್ಟು 2155 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, 1792 ಪ್ರಕರಣಗಳಲ್ಲಿ ನೆಗೆಟಿವ್ ವರದಿ ಬಂದಿದೆ. 361 ಮಂದಿಯ ವರದಿಯನ್ನು ನಿರೀಕ್ಷಿಸಲಾಗಿದೆ.
ಎರಡು ಪಾಸಿಟಿವ್ ಪ್ರಕರಣಗಳಲ್ಲಿ ಒಬ್ಬರು ಗುಣಮುಖರಾಗಿದ್ದು, ಮತ್ತೊಬ್ಬರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.