ಸೋಮವಾರಪೇಟೆ ವ್ಯಕ್ತಿಗೆ ಕೋವಿಡ್ 19 ದೃಢ

24/05/2020

ಮಡಿಕೇರಿ ಮೇ 24 : ಮಹಾರಾಷ್ಟ್ರದಿಂದ ಬಂದು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಸೋಮವಾರಪೇಟೆ ತಾಲೂಕಿನ 25 ವರ್ಷದ ಯುವಕನಿಗೆ ಕೊರೋನಾ ಸೋಂಕು ಇರುವುದು ಭಾನುವಾರ ದೃಢಪಟ್ಟಿದೆ.
ಇದರೊಂದಿಗೆ ಕೊಡಗು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಕಳೆದ ವಾರವಷ್ಟೇ ಮುಂಬೈನಿಂದ ಬಂದಿದ್ದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಕೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದುಬೈನಿಂದ ಆಗಮಿಸಿದ್ದ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆದು ಮುಖರಾಗಿದ್ದಾರೆ.