ಲಾಕ್ ಡೌನ್ ಗೆ ರಾಜ್ಯಾದ್ಯಂತ ಬೆಂಬಲ

25/05/2020

ಬೆಂಗಳೂರು ಮೇ 24 : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಜಾರಿಯಾದ 36 ಗಂಟೆಗಳ ಸಂಪೂರ್ಣ ಲಾಕ್ ಡೌನ್ ಗೆ ರಾಜ್ಯಾದ್ಯಂತ ಉತ್ತಮ ಬೆಂಬಲ ವ್ಯಕ್ತವಾಗಿ ಜನಜೀವನ ಮಂಕಾಗಿತ್ತು.
ಸದಾ ವಾಹನ ಸಂದಣಿಯಿಂದ ಗಿಜಿಗುಡುವ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಬಹಳ ವಿರಳವಾಗಿದೆ. ಇನ್ನು ಬೀದರ್, ಬಳ್ಳಾರಿ ಹಾಗೂ ರಾಮನಗರ ಸಂಪೂರ್ಣ ಸ್ತಬ್ಧವಾಗಿದ್ದು, ಬಸ್ ನಿಲ್ದಾಣಗಳು ಹಾಗೂ ರಸ್ತೆಗಳು ಬಿಕೋ ಎನ್ನುತ್ತಿವೆ.
ಪೊಲೀಸರು ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವವರಿಗೆ ಎಚ್ಚರಿಸುತ್ತಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಗಳಲ್ಲಿ ವಾಹನ ಓಡಾಟ ಅತ್ಯಂತ ವಿರಳವಾಗಿದೆ.