ಬೆಂಗಳೂರು ಬಗ್ಗೆ ಸಿಎಂ ಮೆಚ್ಚುಗೆ

26/05/2020

ಬೆಂಗಳೂರು ಮೇ 25 : ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣ ಹಾಗೂ ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಬೆಂಗಳೂರು ನಗರ ಮುಂಚೂಣಿಯಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೋವಿಡ್-19 ಸೋಂಕು ನಿಯಂತ್ರಣ ವಲಯದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 4 ಮಾದರಿ ನಗರಗಳನ್ನು ಕೇಂದ್ರ ಗುರುತಿಸಿದ್ದು, ಇದರಲ್ಲಿ ಬೆಂಗಳೂರು ಸಹ ಸೇರಿರುವುದು ಹೆಮ್ಮೆಯ ಸಂಗತಿ ಎಂದಿದ್ದಾರೆ.
ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಕೊರೊನಾ ಯೋಧರ ಪರಿಶ್ರಮಕ್ಕೆ ಅನುಮೋದನೆ ದೊರೆತಿದೆ. ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದು, ಉತ್ತಮ ಸೇವೆಯನ್ನು ಮುಂದುವರಿಸೋಣ ಎಂದು ಯಡಿಯೂರಪ್ಪ ಕರೆ ನೀಡಿದ್ದಾರೆ.