ಹೆಣ್ಣು ಮಕ್ಕಳ ಫೋಟೋ ಹಾಕದಂತೆ ಮನವಿ

May 26, 2020

ಬೆಂಗಳೂರು ಮೇ 25 : ಅನಗತ್ಯವಾಗಿ ನಿಮ್ಮ ಹೆಣ್ಣು ಮಕ್ಕಳ ಫೋಟೋವನ್ನು ದಯವಿಟ್ಟು ಆನ್‍ಲೈನ್‍ನಲ್ಲಿ ಅಪ್ಲೋಡ್ ಮಾಡಬೇಡಿ. ಇದರಿಂದ ನಿಮಗೆ ಅವಮಾನ ಮಾಡುತ್ತಾರೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಲಾಕ್?ಡೌನ್ ಸಂದರ್ಭದಲ್ಲಿ ಸೈಬರ್ ಕ್ರೈಂ ಹೆಚ್ಚಾಗುತ್ತಿವೆ. ಎಲ್ಲರೂ ಮನೆಯಲ್ಲೇ ಕೂತು ಸೈಬರ್ ಕ್ರೈಂ ಮಾಡಿದ್ದಾರೆ. ಕೆಲವರು ತರ್ಲೆ ಮಾಡಲು, ಫನ್ ಮಾಡಲು ಆನ್‍ಲೈನ್‍ನಲ್ಲಿ ಪಾಠ ಮಾಡುತ್ತಿದ್ದಾಗ ಅಶ್ಲೀಲ ಫೋಟೋ, ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಈ ಬಗ್ಗೆ ದೂರು ಬಂದರೆ ಖಂಡಿತ ಕ್ರಮ ತೆಗೆದುಕೊಳ್ಳುತ್ತೇವೆ. ಸೈಬರ್ ಕೂಡ ಮನೆಯಿದ್ದಂತೆ ಅದಕ್ಕೆ ಕಿಟಕಿ ಬಾಗಿಲು ಇರುತ್ತೆ. ಮನೆಯನ್ನ ಹೇಗೆ ಕಾಪಾಡುತ್ತೀವೋ ಹಾಗೆ ಆನ್‍ಲೈನ್ ಬಗ್ಗೆನೂ ಎಚ್ಚರಿಕೆ ಇಟ್ಟುಕೊಳ್ಳಬೇಕು ಎಂದು ಸೂಚಿಸಿದರು.