ಜಿಲ್ಲಾಧಿಕಾರಿ ಕಚೇರಿಗೆ ಪ್ರವೇಶಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ

26/05/2020

ಜಿಲ್ಲಾಧಿಕಾರಿ ಕಚೇರಿಗೆ ಪ್ರವೇಶಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ

ಮಡಿಕೇರಿ ಮೇ 26 : ನಗರದ ಜಿಲ್ಲಾಧಿಕಾರಿ ಕಚೇರಿಗೆ ಪ್ರವೇಶಿಸುವವರು ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಮುಖ್ಯ ಪ್ರವೇಶ ದ್ವಾರದಲ್ಲಿಯೇ ಕಚೇರಿಗೆ ಪ್ರವೇಶಿಸುವವರಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಜ್ವರ ಇದೆಯೇ ಎಂದು ಪರೀಕ್ಷಿಸಲಾಗುತ್ತಿದೆ. ಅಂತೆಯೇ ಮಾಸ್ಕ್ ಧರಿಸದವರಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಸ್ಯಾನಿಟೈಸರ್ ಮೂಲಕ ಕಚೇರಿಗೆ ಬರುವವರಿಗೆ ಸ್ಯಾನಿಟೈಸರ್ ನೀಡಲಾಗುತ್ತಿದ್ದು, ಯಾವುದೇ ಸೋಂಕು ಸಂಬಂಧಿತ ಸಮಸ್ಯೆಗಳ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ನಿಗಾವಹಿಸಲಾಗಿದೆ.