ಬೆಂಗಳೂರಿನಲ್ಲಿ ಮಳೆಯ ಅಬ್ಬರ

27/05/2020

ಬೆಂಗಳೂರು ಮೇ 26 : ಬೆಂಗಳೂರಿನಲ್ಲಿ ಮಂಗಳವಾರ ಸಂಜೆ 6 ಗಂಟೆಗೆ ಮಳೆರಾಯ ಅಬ್ಬರಿಸಿದ್ದಾನೆ. ಗುಡುಗು ಮಿಂಚು ಸಮೇತ ಬೆಂಗಳೂರಿನ ಬಹುತೇಕ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿಯೇ ಆಗಿದೆ. ಮಳೆ ನಿಂತ ಮೇಲೆ ರೋಡ್ ಗಳು ಕೆರೆಗಳಾಗಿವೆ. ಬೆಂಗಳೂರಿನ ಡಬ್ಬಲ್ ರೋಡ್ ನಲ್ಲಿ ರೋಡ್ ಯಾವುದು ಎನ್ನುವುದೇ ಗೊತ್ತಾಗದಂತೆ ಮಳೆ ನೀರು ನಿಂತಿದ್ದು ವಾಹನ ಸವಾರರು ನರಕ ಅನುಭವಿಸುತ್ತಿದ್ದಾರೆ. ಇನ್ನೊಂದು ಕಡೆ ವಿಲ್ಸನ್ ಗರ್ಡನ್ ಗೆ ಹೋಗುವ ರೋಡ್ ಸಂಪೂರ್ಣ ಜಲವೃತವಾಗಿದ್ದು, ಮಳೆ ನೀರಿನಿಂದ ರೋಡ್ ಕೆರೆಯಾಗಿದೆ. ಬೆಂಗಳೂರಿನ ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಜಾಲಹಳ್ಳಿ, ಮತ್ತಿಕೆರೆ ಸೇರಿದಂತೆ ಹಲವಡೆ ಬಿರುಸಿನ ಮಳೆಯಾಗಿದೆ. ಭಾನುವಾರ ಲಾಕ್ ಡೌನ್ ಆಗಿದ್ದರಿಂದ ನಗರದಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಇಂದು ಕೆಲಸ ಮುಗಿಸಿ ಮನೆಯತ್ತ ಹೊರಟ ಜನರು ಮಳೆಯಲ್ಲಿ ಸಿಲುಕಿದರು.