ಭಾರತದಲ್ಲಿ ಸಾವಿನ ಸಂಖ್ಯೆ ಕಡಿಮೆ

27/05/2020

ನವದೆಹಲಿ ಮೇ 26 : ದೇಶದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಆದರೆ ಭಾರತದಲ್ಲಿ ಸಾವಿನ ಪ್ರಮಾಣ ವಿಶ್ವದಲ್ಲೇ ಅತ್ಯಂತ ಕಡಿಮೆಯಿದ್ದು, ಪ್ರತಿ ಲಕ್ಷಕ್ಕೆ 0.3 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ.
ಕೋರನಾದಿಂದಾಗಿ ಮೃತಪಟ್ಟವರ ಪ್ರಮಾಣ ಭಾರತದಲ್ಲಿ ಅತಿ ಕಡಿಮೆ ಇದೆ. ಜಾಗತಿಕ ಸರಾಸರಿ, ಪ್ರತಿ ಲಕ್ಷ ಜನರಿಗೆ 4.4 ಇದೆ. ಆದರೆ, ಭಾರತದಲ್ಲಿ ಈ ಪ್ರಮಾಣ 0.3 ರಷ್ಟು ಮಾತ್ರ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಅವರು ಹೇಳಿದ್ದಾರೆ.
ಲಾಕ್ ಡೌನ್, ಸರಿಯಾದ ಸಮಯಕ್ಕೆ ಸೋಂಕಿತರನ್ನು ಪತ್ತೆ ಹಚ್ಚುವುದು ಹಾಗೂ ಕೊವಿಡ್-19 ಪ್ರಕರಣಗಳ ಉತ್ತಮ ನಿರ್ವಹಣೆಯಿಂದ ಭಾರತದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ. ಕಟ್ಟುನಿಟ್ಟಾದ ಕ್ರಮಗಳ ಮೂಲಕ ನಾವು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆದಿದ್ದೇವೆ ಎಂದು ಅಗರ್ವಾಲ್ ಅವರು ತಿಳಿಸಿದ್ದಾರೆ.
ಕೊವಿಡ್-19 ನಿಂದ ಇಲ್ಲಿಯವರೆಗೆ ಒಟ್ಟು 60,490 ರೋಗಿಗಳು ಚೇತರಿಸಿಕೊಂಡಿದ್ದಾರೆ. ಚೇತರಿಕೆಯ ಪ್ರಮಾಣವು ಸುಧಾರಣೆಯಾಗುತ್ತಿದೆ ಮತ್ತು ಪ್ರಸ್ತುತ ಇದು ಶೇ.41.61 ಪ್ರತಿಶತದಷ್ಟಿದೆ. ಸಾವಿನ ಪ್ರಮಾಣವು ವಿಶ್ವದ ಅತ್ಯಂತ ಕೆಳಮಟ್ಟದಲ್ಲಿದೆ ಮತ್ತು ಇದು ಈಗ 2.87 ಪ್ರತಿಶತದಷ್ಟಿದೆ” ಎಂದು ಅಗರ್ವಾಲ್ ಹೇಳಿದರು.