ರಾಹುಲ್ ಗೆ ತಿರುಗೇಟು ನೀಡಿದ ಬಿಜೆಪಿ
27/05/2020

ನವದೆಹಲಿ ಮೇ 26 : ಲಾಕ್ ಡೌನ್ ಮಾಡಿಯೂ ಕೋವಿಡ್-19 ಸೋಂಕು ತಡೆಗಟ್ಟುವಲ್ಲಿ ವಿಫಲವಾದ ಏಕೈಕ ರಾಷ್ಟ್ರ ಭಾರತ ಎಂದು ಮೋದಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ.
ಲಾಕ್ ಡೌನ್ ಭಾರತದ ವೈಫಲ್ಯವಲ್ಲ, ಭಾರತದ ಯಶಸ್ಸು ಎಂದು ಹೇಳಿರುವ ಬಿಜೆಪಿ, ಲಾಕ್ ಡೌನ್ ಜಾರಿಗೊಳಿಸುವುದಕ್ಕೂ ಮುನ್ನ ಭಾರತದಲ್ಲಿ ಕೊರೋನಾ ವೈರಸ್ ಪ್ರಸರಣ ಪ್ರಮಾಣ 3 ದಿನಗಳಿಗೊಮ್ಮೆ ದ್ವಿಗುಣಗೊಳ್ಳುತ್ತಿತ್ತು. ಆದರೆ ಲಾಕ್ ಡೌನ್ ಜಾರಿಗೊಳಿಸಿದ ಬಳಿಕ 13 ದಿನಗಳಿಗೆ ದ್ವಿಗುಣಗೊಂಡಿದೆ ಎಂದು ಹೇಳಿದೆ.
ರಾಹುಲ್ ಗಾಂಧಿ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಮೋದಿ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಲು ಕೈಗೊಂಡ ನಿರ್ಧಾರದಿಂದಾಗಿ ಭಾರತ ಅಮೆರಿಕ, ಫ್ರಾನ್ಸ್, ಸ್ಪೇನ್ ಮಾದರಿಯಲ್ಲಿ ಕೊರೋನಾದಿಂದ ಹೆಚ್ಚು ಅಪಾಯಕ್ಕೆ ಸಿಲುಕಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.