ಮಡಿಕೇರಿ ಶಕ್ತಿ ಆಶ್ರಮಕ್ಕೆ ಜಿಲ್ಲಾಧಿಕಾರಿ ಭೇಟಿ
May 27, 2020
ಮಡಿಕೇರಿ ಮೇ 27 : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಡಿಕೇರಿಯ ತ್ಯಾಗರಾಜ ಕಾಲೋನಿಯ ಶ್ರೀ ಶಕ್ತಿ ವೃದ್ಧಾಶ್ರಮಕ್ಕೆ ಅನಿರೀಕ್ಷಿತ ಭೇಟಿ ನೀಡಿ ಎಲ್ಲಾ ವಯೋವೃದ್ಧರ ಯೋಗಕ್ಷೇಮ ವಿಚಾರಿಸಿದರು. ಹಿರಿಯ ಜೀವಗಳ ಆರೋಗ್ಯದ ಮೇಲೆ ನಿಗಾ ಇಡುವಂತೆ ಸಿಬ್ಬಂದಿಗಳಿಗೆ ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಅರುಂಧತಿ ಈ ಸಂದರ್ಭ ಹಾಜರಿದ್ದರು.