ಸುಂಟಿಕೊಪ್ಪದ ವಿಕಾಸ್ ಜನಸೇವಾ ಟ್ರಸ್ಟ್‌ ನ ಜೀವನ ದಾರಿ ಆಶ್ರಮಕ್ಕೆ ಜಿಲ್ಲಾಧಿಕಾರಿ ಭೇಟಿ

27/05/2020

ಮಡಿಕೇರಿ ಮೇ 27 : ಸುಂಟಿಕೊಪ್ಪದ ವಿಕಾಸ್ ಜನಸೇವಾ ಟ್ರಸ್ಟ್‌ ನ ಜೀವನ ದಾರಿ ಆಶ್ರಮಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿ ಪರಿಶೀಲಿಸಿದರು.
ಆಶ್ರಮದ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಟ್ರಸ್ಟ್ ಅಧ್ಯಕ್ಷ ಹೆಚ್.ಕೆ.ರಮೇಶ್ ಅವರೊಂದಿಗೆ ಸಮಾಲೋಚನೆ ನಡೆಸಿದರು. ಆಶ್ರಮಕ್ಕೆ ನಿಯಮಾನುಸಾರ ಅಗತ್ಯ ನೆರವು ಕಲ್ಪಿಸುವುದಾಗಿ ಭರವಸೆ ನೀಡಿದರು. ಆಶ್ರಯ ಪಡೆದಿರುವ ಅನಾಥರು ಹಾಗೂ ವಯೋವೃದ್ದರ ಆರೋಗ್ಯದ ಬಗ್ಗೆ ಕಾಳಜಿ ತೋರುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಆಶ್ರಮದ ಕಾರ್ಯ ಚಟುವಟಿಕೆಗಳ ಬಗ್ಗೆ ಹೆಚ್.ಕೆ.ರಮೇಶ್ ಅವರು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಅರುಂಧತಿ, ವಿಕಲಚೇತನ ಕಲ್ಯಾಣ ಇಲಾಖೆ ಅಧಿಕಾರಿ ಸಂಪತ್ ಕುಮಾರ್ ಹಾಗೂ ನಮ್ಮ ಸುಂಟಿಕೊಪ್ಪ ತಂಡದ ಪದಾಧಿಕಾರಿಗಳು ಈ ಸಂದರ್ಭ ಹಾಜರಿದ್ದರು. ಜಿಲ್ಲಾಧಿಕಾರಿಗಳು ಆಶ್ರಮದಲ್ಲಿದ್ದವರ ಯೋಗಕ್ಷೇಮ ವಿಚಾರಿಸಿದರು.