ಮೇ 28 ರಂದು ಫೋನ್ ಇನ್ ಕಾರ್ಯಕ್ರಮ

27/05/2020

ಮಡಿಕೇರಿ ಮೇ.27 : ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಕಾರ್ಯಾಲಯದ ನಿಯಂತ್ರಣ ಕೊಠಡಿ ಸಹಾಯವಾಣಿ ಸಂಖ್ಯೆ 1077 ಗೆ ಹಲವು ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗುತ್ತಿದೆ. ಆ ದಿಸೆಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಹಾಗೂ ಕ್ಷಿಪ್ರಗತಿಯಲ್ಲಿ ಪರಿಹರಿಸುವ ನಿಟ್ಟಿನಲ್ಲಿ ‘ನೇರ ಫೋನ್ ಇನ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಆ ದಿಸೆಯಲ್ಲಿ ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಮೇ, 28 ರಂದು ಮಧ್ಯಾಹ್ನ 3 ರಿಂದ 4 ಗಂಟೆವರೆಗೆ ಫೋನ್‍ಇನ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಇತರರು ಪಾಲ್ಗೊಂಡು ಸಾರ್ವಜನಿಕರಿಂದ ಅಹವಾಲು ಆಲಿಸಿ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.