ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿ

28/05/2020

ಬೆಂಗಳೂರು ಮೇ 27 : ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು. ಆ ಮೂಲಕ ಸದೃಢ, ಆರೋಗ್ಯವಂತ ಕರ್ನಾಟಕ ರೂಪಿಸಬೇಕು ಎಂಬುದು ನಮ್ಮ ಕನಸು. ಅದಕ್ಕಾಗಿ ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದರು.
ರಾಜ್ಯ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಹೆಲ್ತ್ ರಿಜಿಸ್ಟರ್ ಯೋಜನೆ ಸಂಬಂಧ ಆರೋಗ್ಯ ವಲಯದ ತಜ್ಞರ ಜತೆ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸುಧಾಕರ್ ನಾಡಿನ ಕಡೆಯ ಮನುಷ್ಯನಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಬೇಕು.ಆ ಮೂಲಕ ಸದೃಢ,ಆರೋಗ್ಯವಂತ ಕರ್ನಾಟಕ ರೂಪಿಸಬೇಕು ಎಂಬುದು ನಮ್ಮ ಕನಸು.ಅದಕ್ಕಾಗಿ ಹೆಲ್ತ್ ರಿಜಿಸ್ಟರ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ.ಇದನ್ನು ಸಾಕಾರಗೊಳಿಸಲು ತಜ್ಞರು ಕೈಜೋಡಿಸಬೇಕು.ಆ ನಿಟ್ಟಿನಲ್ಲಿ ಮೊದಲ ಸಭೆ ನಡೆಸಲಾಗಿದೆ.ಸಭೆಯಲ್ಲಿ ರಾಜ್ಯದ ಆರೋಗ್ಯಕ್ಷೇತ್ರದಲ್ಲಿ ಸೇವೆಸಲ್ಲಿಸಿರುವ ಪರಿಣಿತರು ಪಾಲ್ಗೊಂಡು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.ಯೋಜನೆ ರೂಪುರೇಷೆ ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ತಿಳಿಸಿದರು.