ಪ್ರವಾಸೋದ್ಯಮ ಆರಂಭಕ್ಕೆ ಪರಿಸರವಾದಿಗಳ ವಿರೋಧ

28/05/2020

ಮಡಿಕೇರಿ ಮೇ 28 : ಕಳೆದ ಎರಡು ತಿಂಗಳ ಕೊರೋನಾ ಲಾಕ್ ಡೌನ್ ನಿಂದಾಗಿ ತೀವ್ರ ಆರ್ಥಿಕ ಹಿನ್ನಡೆಯನ್ನು ಅನುಭವಿಸುತ್ತಿರುವ ಪ್ರವಾಸೋದ್ಯಮವನ್ನು ಜೂನ್ ತಿಂಗಳಿನಲ್ಲಿ ಪುನರ್ ಆರಂಭಿಸುವ ಕುರಿತು ಸರ್ಕಾರ ಚಿಂತನೆ ನಡೆಸಿರುವ ಬೆನ್ನಲ್ಲೇ ಕೊಡಗಿನ ಪರಿಸರವಾದಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಜಿಲ್ಲೆಯನ್ನು ಪ್ರವೇಶಿಸುವುದರಿಂದ ಪರಿಸರ ಕಲುಷಿತಗೊಳ್ಳುವುದಲ್ಲದೆ, ಹೊರಗಿನಿಂದ ಬರುವವರಿಂದ ಸೋಂಕು ಹರಡಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಧ್ಯಕ್ಕೆ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿದ್ದಾರೆ.