ರಾಜ್ಯ ಪ್ರಾಕೃತಿಕ ವಿಕೋಪ ಕೇಂದ್ರದೊಂದಿಗೆ ನಿರಂತರ ಸಂಪರ್ಕ

28/05/2020

ಮಡಿಕೇರಿ ಮೇ 28 : ಜಿಲ್ಲಾಡಳಿತವು ರಾಜ್ಯ ಪ್ರಾಕೃತಿಕ ವಿಕೋಪ ಕೇಂದ್ರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಭಾರತೀಯ ಹವಾಮಾನ ಇಲಾಖೆಯಿಂದ ನೀಡಲಾಗುವ ಹವಾಮಾನ ಮುನ್ಸೂಚನೆಗಳನ್ನು ಪಡೆದು, ಜಿಲ್ಲೆಗೆ ಏನಾದರೂ ಪ್ರತಿಕೂಲ ಹವಾಮಾನವಿದ್ದಲ್ಲಿ ಅದನ್ನು ಸಾರ್ವಜನಿಕರಿಗೆ ತಿಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕಚೇರಿಯಿಂದ ಹವಾಮಾನ ಮುನ್ಸೂಚನೆಯನ್ನು ಸಾಮಾಜಿಕ ಜಾಲತಾಣ, ವಾಟ್ಸಾಪ್ ಮತ್ತು ಮಾಧ್ಯಮಗಳ ಮೂಲಕ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.