ತನಲ್ ಆಶ್ರಮದಲ್ಲಿ ಆಶ್ರಯ ಪಡೆದವರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ

May 28, 2020

ಮಡಿಕೇರಿ ಮೇ 28 : ಅನಾಥ ಹಾಗೂ ನಿರ್ಗತಿಕ ಮಹಿಳೆಯರ ಆಶ್ರಯ ತಾಣವಾಗಿರುವ ಮಡಿಕೇರಿಯ ತನಲ್ ಸಂಸ್ಥೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭೇಟಿ ನೀಡಿದರು. ಆಶ್ರಮದಲ್ಲಿ ಆಶ್ರಯ ಪಡೆದವರ ಆರೋಗ್ಯ ವಿಚಾರಿಸಿದರು. ಕೊರೋನಾ ಸೋಂಕು ವ್ಯಾಪಿಸದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಸ್ವಚ್ಛತೆ ಮತ್ತು ಆಶ್ರಮದ ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸ್ಥೆಯ ಮೇಲುಸ್ತುವಾರಿ ಎಂ.ಹೆಚ್.ಮೊಹಮ್ಮದ್ ಮುಸ್ತಫ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು.