ಜಂಬೂರು ಗ್ರಾಮದಲ್ಲಿ 383 ಮನೆಗಳ ನಿರ್ಮಾಣ ಕಾರ್ಯ ಪೂರ್ಣ

28/05/2020

ಮಡಿಕೇರಿ ಮೇ 28 : ಸೋಮವಾರಪೇಟೆ ತಾಲ್ಲೂಕಿನ ಜಂಬೂರು ಗ್ರಾಮದಲ್ಲಿ ಮಳೆಹಾನಿ ಸಂತ್ರಸ್ತರಿಗಾಗಿ 383 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಉಪವಿಭಾಗಾಧಿಕಾರಿ ಜವರೇಗೌಡ ತಿಳಿಸಿದ್ದಾರೆ.
ಇದೇ ಗ್ರಾಮದಲ್ಲಿ ಇನ್‍ಫೋಸಿಸ್ ಸಂಸ್ಥೆ ಸಂತ್ರಸ್ತರಿಗಾಗಿ 200 ಮನೆಗಳನ್ನು ನಿರ್ಮಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ. ಮಡಿಕೇರಿ ತಾಲ್ಲೂಕಿನ ಮದೆ ಗ್ರಾಮದಲ್ಲಿ 80 ಮನೆಗಳು ನಿರ್ಮಾಣಗೊಂಡಿದ್ದು, ಫಲಾನುಭವಿಗಳಿಗೆ ಸಧ್ಯದಲ್ಲೇ ಹಸ್ತಾಂತರಿಸಲಾಗುವುದೆಂದು ಅವರು ಹೇಳಿದ್ದಾರೆ.