ವನ್ಯಜೀವಿಗಳ ಉಪಟಳಕ್ಕೆ ಕಡಿವಾಣ : ಮನುಸೋಮಯ್ಯ ಒತ್ತಾಯ

28/05/2020

ಮಡಿಕೇರಿ ಮೇ 28 : ಜಿಲ್ಲೆಯಲ್ಲಿ ಕಾಡಾನೆ ಮತ್ತು ಹುಲಿ ದಾಳಿಯಿಂದ ರೈತರು ಕಂಗಾಲಾಗಿದ್ದು, ಸರ್ಕಾರ ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮನುಸೋಮಯ್ಯ ಒತ್ತಾಯಿಸಿದ್ದಾರೆ. ಕಾಫಿ ಮತ್ತು ಕರಿಮೆಣಸು ಬೆಳೆಗೆ ವೈಜ್ಞಾನಿಕ ಬೆಲೆಯನ್ನು ನಿಗದಿಪಡಿಸಬೇಕು. ಜಿಲ್ಲೆಯ ರೈತರು ಉಪಯೋಗಿಸುವ 10 ಹೆಚ್.ಪಿ ಪಂಪ್‍ಸೆಟ್‍ಗಳಿಗೆ ಉಚಿತ ವಿದ್ಯುತ್ ನೀಡಬೇಕು. ರೈತರ ಬೆಳೆಯನ್ನು ಶೇಖರಿಸಿಡಲು ದೊಡ್ಡ ಪ್ರಮಾಣದ ಕೋಲ್ಡ್ ಸ್ಟೋರೇಜ್ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದ್ದಾರೆ.