ತೂಚಮಕೇರಿ ಗ್ರಾಮ ಸಂಪರ್ಕ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ವೀಣಾಅಚ್ಚಯ್ಯ ಸೂಚನೆ

28/05/2020

ಮಡಿಕೇರಿ ಮೇ 28 : ವಿರಾಜಪೇಟೆ ತಾಲ್ಲೂಕಿನ ತೂಚಮಕೇರಿ ಗ್ರಾಮ ಸಂಪರ್ಕ ರಸ್ತೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ತಾಲ್ಲೂಕು ಪಂಚಾಯತ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಡಿದಾದ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಕಾಯ್ದಿರಿಸಲಾಗಿದ್ದು, ತಡ ಮಾಡದೆ ಗುಣಮಟ್ಟದ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ತಿಳಿಸಿದರು. ಸ್ಥಳೀಯ ಪುಟ್ಟಂಗಡ ಕುಟುಂಬಸ್ಥರು ಸೇರಿದಂತೆ ಅನೇಕರು ಈ ರಸ್ತೆಯ ಮೂಲಕ ಸಂಪರ್ಕ ಸಾಧಿಸಬಹುದಾಗಿದೆ.